ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.5 ರಂದು ನಾಳೆ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಈ ಹಿನ್ನೆಲೆ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು 4459 ಪೊಲೀಸನ್ನು ನಿಯೋಜಿಸಲಾಗಿದೆ. ನಾಳೆ ನಡೆಯುವ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು, ಕೈ ನಾಯಕರು ಭಾಗಿಯಾಗಲಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ 12 ಡಿಸಿಪಿ, 45 ಎಸಿಪಿ. 128 ಪಿಐ, 421 ಎಎಸ್ ಐ/ಪಿಎಸ್ಐ, 3272 ಕಾನ್ಸ್ ಟೇಬಲ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಇದರ ಜೊತೆಗೆ ಗರುಡಾ ಪಡೆ, 6 ಆ್ಯಂಬುಲೆನ್ಸ್, 4 ಅಗ್ನಿಶಾಮಕ ವಾಹನ ನಿಯೋಜಿಸಲಾಗಿದೆ.ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಶೇಷಾದ್ರಿಪುರಂ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ.
ಭಾರತದಲ್ಲಿ ಚುನಾವಣೆಯನ್ನೇ ಕದಿಯಲಾಗುತ್ತಿದೆ ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಇದರ ವಿರುದ್ಧ ಹೋರಾಟಕ್ಕೆ ಬೆಂಗಳೂರಿನಿಂದಲೇ ಚಾಲನೆ ನೀಡಲಿದ್ದಾರೆ.