ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದೆ. ಶಾಂತಿನಗರದ ವನ್ನಾರ್ ಪೇಟೆಯಲ್ಲಿ 13 ಮಿ.ಮೀ. ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ತಡರಾತ್ರಿವರೆಗೂ ಮಳೆಯಾದ ವರದಿಯಾಗಿದೆ.
ಇನ್ನು ಆಗಸ್ಟ್ 4ರ ಸೋಮವಾರದಿಂದ ಆಗಸ್ಟ್ 6ರ ಬುಧವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿ ಬೀಸಲಿದೆ. ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹೇಳಲಾಗಿದೆ.