ಬೆಂಗಳೂರು : ಬೆಂಗಳೂರಿನಲ್ಲಿ ದುಷ್ಕರ್ಮಿಗಳು ನಂದಿನಿ ಹಾಲಿನ ಪಾರ್ಲರ್ ದರೋಡೆ ಮಾಡಿದ್ದು, 3 ಲಕ್ಷ ಹಣ ದೋಚಿ ಖದೀಮರು ಎಸ್ಕೇಪ್ ಆಗಿದ್ದಾರೆ.
ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗಳೂರು ತುಮಕೂರು ರಸ್ತೆಯ 8 ನೇ ಮೈಲಿ ಬಳಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ನಂದಿನಿ ಪಾರ್ಲರ್ ಬೀಗ ಮುರಿದು , ಕ್ಯಾಶ್ ಕೌಂಟರ್ ನಲ್ಲಿದ್ದ ಸುಮಾರು 3 ಲಕ್ಷ ಹಣ ಕಳವು ಮಾಡಿ ಪರಾರಿಯಾಗಿದ್ದಾರೆ . ದುಷ್ಕರ್ಮಿಗಳ ಬಂಧನಕ್ಕೆ ಪೊಲಿಸರು ಬಲೆ ಬೀಸಿದ್ದು, ತನಿಖೆ ನಡೆಸುತ್ತಿದ್ದಾರೆ.
You Might Also Like
TAGGED:ನಂದಿನಿ