ಬೆಂಗಳೂರು: ಬೆಂಗಳೂರು ರಸ್ತೆಯಲ್ಲಿ 5 ಕೋಟಿ ರೂ. ಮೌಲ್ಯದ ಲ್ಯಾಂಬೋರ್ಗಿನಿ ಅವೆಂಟಡಾರ್ ಬೆಂಕಿಗೆ ಆಹುತಿಯಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಲ್ಯಾಂಬೋರ್ಗಿನಿ ಅವೆಂಟಡಾರ್ ಬೆಂಕಿಗೆ ಆಹುತಿಯಾದ ಘಟನೆಯ ವೀಡಿಯೊವನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ಅದನ್ನು ಸಾಮಾಜಿಕ ಮಾಧ್ಯಮ ವೇದಿಕೆಯಾದ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತಕ್ಕೆ ಒಳಗಾದ ಲ್ಯಾಂಬೋರ್ಗಿನಿ ಅವೆಂಟಡಾರ್ ಸಂಜು ಎಂಬ ಸಾಮಾಜಿಕ ಮಾಧ್ಯಮ ಪ್ರಭಾವಿಗೆ ಸೇರಿದ್ದಾಗಿದೆ.
Ka_11_Editor’ ಎಂಬ ಬಳಕೆದಾರರು ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಇದು ಇಲ್ಲಿಯವರೆಗೆ 50 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಕಂಡಿದೆ. ವೀಡಿಯೊದಲ್ಲಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾದ ಕಿತ್ತಳೆ ಬಣ್ಣದ ಲ್ಯಾಂಬೋರ್ಗಿನಿ ಅವೆಂಟಡಾರ್ ಕಾರ್ ಮುಂಭಾಗವನ್ನು ತೆರೆದುಕೊಂಡಿರುವುದನ್ನು ಕಾಣಬಹುದು ಮತ್ತು ಕಾರ್ ಹಿಂಭಾಗದಿಂದ ಜ್ವಾಲೆಗಳು ಸಿಡಿಯುವುದು, ಜನ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿರುವುದನ್ನು ಕಾಣಬಹುದು. ನಂತರ ಅಗ್ನಿಶಾಮಕ ದಳದ ಸಹಾಯದಿಂದ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು. ಘಟನೆಯ ಸಂಪೂರ್ಣ ವೀಡಿಯೊವನ್ನು ನೀವು ಇಲ್ಲಿ ವೀಕ್ಷಿಸಬಹುದು.