ಬೆಂಗಳೂರು : ಮುಷ್ಕರಕ್ಕೆ ಮುಂದಾದ ರಾಜ್ಯದ ಸಾರಿಗೆ ನೌಕರರಿಗೆ ಬಿಗ್ ಶಾಕ್ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದು, ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಮುಷ್ಕರಕ್ಕೆ ಮುಂದಾದ ರಾಜ್ಯದ ಸಾರಿಗೆ ನೌಕರರಿಗೆ ಬಿಗ್ ಶಾಕ್ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ. ಅಗತ್ಯಬಿದ್ದರೆ ವೀಕ್ಲಿ ಆಫ್ ಕೂಡ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗಸ್ಟ್ 5 ರಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯುವುದು ಅನುಮಾನವಾಗಿದೆ.
ನಾಳೆಯಿಂದ ಸಾರಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.