ಗಾಳಿಬೀಡಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27 ನೇ ಶೈಕ್ಷಣಿಕ ವರ್ಷಕ್ಕೆ ಆರನೇ ತರಗತಿಗೆ ಪ್ರವೇಶ ಪಡೆಯಲು ಈಗಾಗಲೇ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 13 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮತ್ತು ಬೇಕಾದ ಮಾಹಿತಿ ಪಡೆಯಲು ವೆಬ್ ವಿಳಾಸ https://cbseitms.rcil.gov.in/nvs ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
You Might Also Like
TAGGED:ನವೋದಯ ವಿದ್ಯಾಲಯ