ಶಿವಮೊಗ್ಗ : ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಗುಂಡ ನಾಯಕ್ (72) ಲಕ್ಷಮ್ಮ ( 58) ಎಂದು ಗುರುತಿಸಲಾಗಿದೆ. ಮನೆ ಕಟ್ಟಿಸಲು ದಂಪತಿಗಳು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಆಗದೇ ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.