BREAKING : ರಾಜ್ಯದಲ್ಲಿ ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಸದಂತೆ ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ.!

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಸಂಬಂಧ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆದಿದೆ. ಒಂದು ದಿನದ ಮಟ್ಟಿಗೆ ಮುಷ್ಕರ ಕೈ ಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸಲು ಸಜ್ಜಾಗಿದ್ದು, ಸರ್ಕಾರ, ಸಾರಿಗೆ ನಿಗಮಗಳಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಸಾರಿಗೆ ನೌಕರರ ಮುಷ್ಕರ ನಡೆದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ. ಒಂದು ದಿನದ ಮಟ್ಟಿಗೆ ಮುಷ್ಕರ ಕೈ ಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗಸ್ಟ್ 5 ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ನೌಕರರ ಮನವೊಲಿಸುವ ಕೆಲಸ ಮಾಡಿದ್ದರು. ಆದರೆ ಸಾರಿಗೆ ಸಂಘಟನೆಗಳ ಮುಖಂಡರ ಜೊತೆ ನಡೆದ ಸಭೆ ವಿಫಲವಾಗಿದ್ದು, ನಾವು ಮುಷ್ಕರ ಮಾಡೇ ಮಾಡುತ್ತೇವೆ ಎಂದು ಹೇಳಿ ಸಾರಿಗೆ ನೌಕರರ ಮುಖಂಡರು ಸಭೆಯಿಂದ ಹೊರಗೆ ಬಂದಿದ್ದರು. ಇದರ ನಡುವೆ ಹೈಕೋರ್ಟ್ ಮುಷ್ಕರ ನಡೆಸದಂತೆ ಸಾರಿಗೆ ನೌಕರರಿಗೆ ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read