ಬೆಂಗಳೂರು: ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದೊಂದಿಗೆ ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಈ ನಡುವೆ ಮುಷ್ಕರವನ್ನು ಒಂದು ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಇದರ ಹೊರತಾಗಿಯೂ ಹಿಂದೆ ಸರಿಯದ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರ ಮಂಗಳವಾರ ಬೆಳಿಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ.
ರಾಜ್ಯಾದ್ಯಂತ ಬಸ್ ಗಳ ಸೇವೆಯಲ್ಲಿ ವ್ಯತ್ಯಯವಾಗಲಿದ್ದು, ಒಂದು ಕೋಟಿಗೂ ಹೆಚ್ಚು ಪ್ರಯಾಣಿಕರು ಪರದಾಡುವ ಆತಂಕ ಶುರುವಾಗಿದೆ.
ಇಂದಿನಿಂದ ಮುಷ್ಕರ ಆರಂಭಿಸುವುದಾಗಿ ಹೇಳಲಾಗಿದ್ದರೂ ನಿನ್ನೆಯಿಂದಲೇ ಅನೇಕ ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತವಾಗಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಸರ್ಕಾರಿ ಬಸ್ ಸಂಚಾರ ಬಂದ್ ಆದಾಗ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಖಾಸಗಿ ಬಸ್ ಗಳ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ.
ಹೈಕೋರ್ಟ್ ಆದೇಶದ ನಡುವೆಯೂ ಪ್ರಯಾಣಿಕರಿಗೆ ಮುಷ್ಕರದ ಬಿಸಿ ತಟ್ಟಿದೆ. ಹಾಸನದಲ್ಲಿ ನಿನ್ನೆಯೇ ಬಸ್ ಗಳು ಇಲ್ಲದೆ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ನಿನ್ನೆ ಮಧ್ಯಾಹ್ನದಿಂದಲೇ ಸರ್ಕಾರಿ ಬಸ್ ಗಳು ಇಲ್ಲದ ಕಾರಣ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ತಿಪಟೂರು, ಅರಸೀಕೆರೆ ಸೇರಿದಂತೆ ಹಲವು ಕಡೆ ಬಸ್ ಗಳ ಕೊರತೆ ಉಂಟಾಗಿದೆ. ಕೂಡಲೇ ಬಸ್ ವ್ಯವಸ್ಥೆ ಮಾಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.