HomeLatest NewsBREAKING: ಸಾರಿಗೆ ನೌಕರರ ಮುಷ್ಕರದಿಂದ ಬಸ್ ಬಂದ್: ರಾಜ್ಯದಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಇರಲ್ಲ,...

BREAKING: ಸಾರಿಗೆ ನೌಕರರ ಮುಷ್ಕರದಿಂದ ಬಸ್ ಬಂದ್: ರಾಜ್ಯದಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಇರಲ್ಲ, ಎಂದಿನಂತೆ ಕಾರ್ಯ ನಿರ್ವಹಣೆ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರ ಪರಿಣಾಮ ಬಸ್ ಸಂಚಾರ ಇಲ್ಲದೇ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ.

ಬಸ್ ಬಂದ್ ಆಗಿದ್ದರೂ ರಾಜ್ಯದಲ್ಲಿ ಇಂದು ಶಾಲೆಗಳಿಗೆ ಯಾವುದೇ ರೀತಿಯ ರಜೆ ಇರುವುದಿಲ್ಲ. ಸರ್ಕಾರಿ, ಖಾಸಗಿ ಅನುದಾನಿತ ಶಾಲೆ, ಕಾಲೇಜುಗಳಿಗೆ ರಜೆ ಇರುವುದಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದ್ದು, ಬಸ್ ಸಗಳನ್ನು ಆಶ್ರಯಿಸಿರುವ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ.

ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು, ಜನತೆಗೆ ಬಸ್ ಬಂದ್ ಬಿಸಿ ತಟ್ಟಲಿದೆ. ಈಗಾಗಲೇ ಬಹುತೇಕ ಕಡೆ ಬಸ್ ಸಂಚಾರ ಸ್ಥಗಿತವಾಗಿ ತೊಂದರೆಯಾಗಿದೆ. ಸಾರಿಗೆ ನೌಕರರು ಕೆಲಸಕ್ಕೆ ಗೈರು ಹಾಜರಾಗಿರುವುದರಿಂದ ಮುಷ್ಕರ ಬಿಸಿ ತಟ್ಟಿದೆ. ಹೀಗಿದ್ದರೂ ಎಂದಿನಂತೆ ಶಾಲಾ, ಕಾಲೇಜ್ ನಡೆಯಲಿವೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular