HomeLatest Newsರೈತರಿಗೆ ಗುಡ್ ನ್ಯೂಸ್: ಆರ್ಜಿ ಸಲ್ಲಿಸದಿದ್ದರೂ ಸರ್ಕಾರದಿಂದಲೇ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು

ರೈತರಿಗೆ ಗುಡ್ ನ್ಯೂಸ್: ಆರ್ಜಿ ಸಲ್ಲಿಸದಿದ್ದರೂ ಸರ್ಕಾರದಿಂದಲೇ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು

ಬೆಂಗಳೂರು: ರಾಜ್ಯದಲ್ಲಿ ಸುಮಾರು 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿ ಮುಂದುವರೆಯುತ್ತಿದ್ದು, ವಾರಸುದಾರರ ನಡುವೆ ತಕರಾರು ಇಲ್ಲದ ಎಲ್ಲಾ ಜಮೀನುಗಳನ್ನು ಪೌತಿ ಖಾತೆ ಅಭಿಯಾನದ ಮೂಲಕ ಡಿಸೆಂಬರ್ ಒಳಗೆ ವಾರಸುದಾರರ ಹೆಸರಿಗೆ ಬದಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸಸೌಧರಲ್ಲಿ ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ಮಾಸಿಕ ಪ್ರಗತಿ ಪರಿಶೀನಾ ಸಭೆ ನಡೆಸಿ ಮಾತನಾಡಿದರು.

ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಹನಿ ನೀರಾವರಿ, ಯಂತ್ರೋಪಕರಣ ಖರೀದಿ ಸಬ್ಸಿಡಿ, ಪಿಎಂ ಕಿಸಾನ್ ಸೌಲಭ್ಯ ನೀಡದಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಹೀಗಾಗಿ ನಾವೇ ರೈತರ ಮನೆ ಬಾಗಿಲಿಗೆ ತೆರಳಿ ಅಭಿಯಾನ ಮಾದರಿಯಲ್ಲಿ ಪೌತಿ ಖಾತೆ ಮಾಡಿಕೊಡುತ್ತಿದ್ದೇವೆ. ಇದಕ್ಕಾಗಿ ವಿಎಗಳಿಗೆ ಪ್ರತಿ ಪ್ರಕರಣಕ್ಕೆ ಆರು ರೂಪಾಯಿ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular