BIG NEWS : ಬೆಂಗಳೂರಲ್ಲಿ ಇಂದು ನಿಗದಿಯಾಗಿದ್ದ ‘ರಾಹುಲ್ ಗಾಂಧಿ’ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆ ಆ.8 ಕ್ಕೆ ಮುಂದೂಡಿಕೆ.!

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆ ಆಗಸ್ಟ್ 8 ಕ್ಕೆ ಮುಂದೂಡಿಕೆಯಾಗಿದೆ.

ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನದ ಹಿನ್ನೆಲೆ ಇಂದು ನಡೆಯಬೇಕಿದ್ದ ಪ್ರತಿಭಟನೆಯನ್ನು ಆಗಸ್ಟ್ 8 ಕ್ಕೆ ಮುಂದೂಡಲಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.5 ರಂದು ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಭಾರತದಲ್ಲಿ ಚುನಾವಣೆಯನ್ನೇ ಕದಿಯಲಾಗುತ್ತಿದೆ ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಇದರ ವಿರುದ್ಧ ಹೋರಾಟಕ್ಕೆ ಬೆಂಗಳೂರಿನಿಂದಲೇ ಚಾಲನೆ ನೀಡಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read