HomeLatest NewsBREAKING: ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರದಲ್ಲಿ ಭಾರೀ ವ್ಯತ್ಯಯ: ಪ್ರಯಾಣಿಕರ ಸುಲಿಗೆಗಿಳಿದ ಖಾಸಗಿ ಬಸ್, ವಾಹನ...

BREAKING: ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರದಲ್ಲಿ ಭಾರೀ ವ್ಯತ್ಯಯ: ಪ್ರಯಾಣಿಕರ ಸುಲಿಗೆಗಿಳಿದ ಖಾಸಗಿ ಬಸ್, ವಾಹನ ಚಾಲಕರಿಗೆ ಹಬ್ಬ…!

ಬೆಂಗಳೂರು: ವೇತನ ಹೆಚ್ಚಳ, ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರ ಕೈಗೊಂಡಿದ್ದು, ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

ಸರ್ಕಾರಿ ಬಸ್ ಗಳು ಇಲ್ಲದೆ ಪ್ರಯಾಣಿಕರು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಕೆಲಸಕ್ಕೆ ಹೋಗುವವರಿಗೆ ಭಾರಿ ತೊಂದರೆಯಾಗಿದ್ದು, ಪರದಾಟ ನಡೆಸಿದ್ದಾರೆ. ಬಹುತೇಕರು ಖಾಸಗಿ ವಾಹನಗಳು, ಬಸ್ ಗಳಲ್ಲಿ ತೆರಳುತ್ತಿದ್ದಾರೆ. ಇದೇ ವೇಳೆ ಖಾಸಗಿ ಬಸ್ ಗಳು ಸುಲಿಗೆಗೆ ಇಳಿದಿವೆ. ಅನೇಕ ಕಡೆಗಳಲ್ಲಿ ಖಾಸಗಿ ವಾಹನಗಳು ಮತ್ತು ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡತೊಡಗಿದ್ದಾರೆ ಎನ್ನುವ ದೂರುಗಳು ಕೇಳಿ ಬಂದಿವೆ.

ಗದಗ -ಮುಂಡರಗಿಗೆ 58 ರೂಪಾಯಿ ಪ್ರಯಾಣ ದರ ಇದ್ದು, ಖಾಸಗಿ ವಾಹನ ಚಾಲಕರು 100 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವುದರಿಂದ ಖಾಸಗಿ ವಾಹನಗಳಿಗೆ ಹಬ್ಬ ಶುರುವಾಗಿದ್ದು, ಹಲವು ಕಡೆ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular