HomeLatest NewsBIG NEWS : ಆಗಸ್ಟ್ 10 ಕ್ಕೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ, ಬೃಹತ್...

BIG NEWS : ಆಗಸ್ಟ್ 10 ಕ್ಕೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ, ಬೃಹತ್ ಸಮಾವೇಶ ನಿಗದಿ.!

ಬೆಂಗಳೂರು : ಆಗಸ್ಟ್ 10 ಕ್ಕೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದು, ಬೃಹತ್ ಸಮಾವೇಶದಲ್ಲಿ ಕೂಡ ಭಾಗಿಯಾಗಲಿದ್ದಾರೆ.

ಹೌದು. ಆ.10 ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಬಿಜೆಪಿ ಆಯೋಜಿಸಿರುವ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಅರ್ಧ ಕಿಮೀನಷ್ಟು ರೋಡ್ ಶೋ ಕೂಡ ನಡೆಸಲಿದ್ದಾರೆ. ಮೆಟ್ರೋ ಕಾರ್ಯಕ್ರಮ ಮುಗಿದ ಬಳಿಕ ಮೋದಿ ಮೆಟ್ರೋ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಯನಗರದಲ್ಲಿರುವ ಶಾಲಿನ ಆಟದ ಮೈದಾನದಲ್ಲಿ ಸಮಾವೇಶ ನಿಗದಿಯಾಗಿದೆ.

ಆಗಸ್ಟ್.10 ರಂದು ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ. ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುವ ಸಾಧ್ಯತೆಯಿದೆ. ಬಸವನಗುಡಿಯ ರಾಷ್ಟ್ರೀಯ ವಿದ್ಯಾಲಯ ರಸ್ತೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್, ಜಯದೇವ ಆಸ್ಪತ್ರೆ ಪ್ರಮುಖ ಕೇಂದ್ರಗಳ ಮೂಲಕ ಬೊಮ್ಮಸಂದ್ರದವರೆಗೆ ಸಂಪರ್ಕ ಕಲ್ಪಿಸಲಾಗಿದೆ. ಈ ಮಾರ್ಗದಲ್ಲಿ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆ ನಡೆಸಲಿದ್ದು, 19.15 ಕಿಲೋಮೀಟರ್ ದೂರ ಹೊಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೊಮ್ಮಸಂದ್ರ, ಹೆಬ್ಬಗೋಡಿ, ಇನ್ಫೋಸಿಸ್ ಫೌಂಡೇಶನ್, ಎಲೆಕ್ಟ್ರಾನಿಕ್ ಸಿಟಿ, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ ಸೆಂಟ್ರಲ್, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿಗುಡ್ಡ, ಆರ್.ವಿ. ರಸ್ತೆ ನಿಲ್ದಾಣದವರೆಗೆ ಕಾರ್ಯಾಚರಣೆ ನಡೆಸಲಿದೆ. ಒಟ್ಟು 16 ನಿಲ್ದಾಣ ಒಳಗೊಂಡಿದೆ. ಈ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾದ ನಂತರ ಪ್ರತಿದಿನ ಸುಮಾರು 2.6 ಲಕ್ಷ ಪ್ರಯಾಣಿಕರು ಸಂಚರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆಂಗಳೂರಿನ ವಿಸ್ತರಿಸುತ್ತಿರುವ ಮೆಟ್ರೋ ಜಾಲದ ಭಾಗವಾಗಿರುವ ನಮ್ಮ ಮೆಟ್ರೋ ಹಳದಿ ಮಾsರ್ಗವು ನಗರದ ಸಂಚಾರ ದಟ್ಟಣೆಯಿಂದ ಬಳಲುತ್ತಿರುವ ಪ್ರಯಾಣಿಕರಿಗೆ ಪ್ರಮುಖ ಪರಿಹಾರವನ್ನು ನೀಡಲು ಸಜ್ಜಾಗಿದೆ. ಈ ಹೊಸ ಮಾರ್ಗವು ನಗರದ ಪ್ರಮುಖ ವಸತಿ ಮತ್ತು ಕೈಗಾರಿಕಾ ವಲಯಗಳಲ್ಲಿ ಸಾರ್ವಜನಿಕ ಸಾರಿಗೆ ಪ್ರವೇಶವನ್ನು ಸುಧಾರಿಸುವ ನಿರೀಕ್ಷೆಯಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular