BREAKING: ಹಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭ

ಬೆಂಗಳೂರು: ವೇತನ ಹೆಚ್ಚಳ, ವೇತನ ಹೆಚ್ಚಳದ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ನೌಕರರು ಇಂದಿನಿಂದ ಮುಷ್ಕರ ಕೈಗೊಂಡಿದ್ದಾರೆ.

ಇದರ ಪರಿಣಾಮ ರಾಜ್ಯದ್ಯಂತ ಬಸ್ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಕೆಲವೆಡೆ ಸಾರಿಗೆ ಸಂಚಾರ ವಿರಳವಾಗಿದೆ. ಬಸ್ ಗಳ ಸಂಖ್ಯೆ ಭಾರಿ ಕಡಿಮೆಯಾಗಿರುವುದರಿಂದ ಪ್ರಯಾಣಿಕರು, ವಿದ್ಯಾರ್ಥಿಗಳು, ಕೆಲಸ ಕಾರ್ಯಗಳಿಗೆ ತೆರಳುವವರು ಪರದಾಟ ನಡೆಸುವಂತಾಗಿದೆ.

ಬೆಂಗಳೂರು, ಕಲಬುರಗಿ, ಬೆಳಗಾವಿ ಸೇರಿದಂತೆ ಹಲವೆಡೆ ಸರ್ಕಾರಿ ಬಸ್ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಶುರುವಾಗಿದೆ.

ಕೆಲವು ಕಡೆ ಸರ್ಕಾರಿ ಬಸ್ ನಿಲ್ದಾಣಕ್ಕೆ ಖಾಸಗಿ ಬಸ್ ಗಳು ಎಂಟ್ರಿ ಕೊಟ್ಟಿದ್ದು, ವಿವಿಧ ಮಾರ್ಗಗಳಲ್ಲಿ ಸೇವೆ ಆರಂಭಿಸಿವೆ. ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಶುರುವಾಗಿದೆ. ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಬೆಳಗಾವಿ ಬಸ್ ನಿಲ್ದಾಣಕ್ಕೆ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಭೇಟಿ ನೀಡಿದ್ದಾರೆ. ಬಸ್ ಸಂಚಾರದ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಗತ್ಯವಾದರೆ ಪೊಲೀಸ್ ಎಸ್ಕಾರ್ಟ್ ನೀಡಲಾಗುವುದು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ತಿಳಿಸಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲಾಡಳಿತ ಜೊತೆಗೆ ಸಭೆ ಮಾಡಿದ ನಂತರ ಖಾಸಗಿ ವಾಹನಗಳ ಬಳಕೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮುಷ್ಕರ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಚ್ಚೆಚ್ಚರಿಕೆ ವಹಿಸಲಾಗಿದೆ. ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read