ನವದೆಹಲಿ : 17,000 ಕೋಟಿ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಅನಿಲ್ ಅಂಬಾನಿ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ವಿರುದ್ಧ ಜಾರಿ ನಿರ್ದೇಶನಾಲಯವು 3,000 ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲುಕ್ ಔಟ್ ಸುತ್ತೋಲೆ ಹೊರಡಿಸಿತ್ತು. ಮಂಗಳವಾರ ( ಆಗಸ್ಟ್ 5 ) ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಅಂತೆಯೇ ಇಂದು ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
2017 ಮತ್ತು 2019 ರ ನಡುವೆ ಯೆಸ್ ಬ್ಯಾಂಕ್ ರಿಲಯನ್ಸ್ ಗ್ರೂಪ್ ಕಂಪನಿಗಳಿಗೆ ನೀಡಿದ ಸುಮಾರು 3,000 ಕೋಟಿ ರೂ. ಸಾಲವನ್ನು ಬೇರೆಡೆಗೆ ತಿರುಗಿಸಿದ ಆರೋಪದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಸಾಲಗಳನ್ನು ಮಂಜೂರು ಮಾಡುವ ಮೊದಲು ಬ್ಯಾಂಕಿನ ಪ್ರವರ್ತಕರು ಪಾವತಿಗಳನ್ನು ಸ್ವೀಕರಿಸಿದ್ದಾರೆ ಎಂದು ಸಂಸ್ಥೆ ಕಂಡುಕೊಂಡಿದೆ.
#WATCH | Delhi: Anil Ambani reaches the Enforcement Directorate office after being summoned for questioning as part of ED's ongoing probe into an alleged Rs 17,000-crore loan fraud case. pic.twitter.com/IBZmhZiJmn
— ANI (@ANI) August 5, 2025