ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ (79) ಅವರು ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದರು.
ಅವರು ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ತಿಳಿದು ಬಂದಿದೆ.ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮೃತಪಟ್ಟಿದ್ದಾರೆ. ಗೋವಾ ರಾಜ್ಯಪಾಲರಾಗಿಯೂ ಕೂಡ ಅವರು ಸೇವೆ ಸಲ್ಲಿಸಿದ್ದರು.

