ರಾಮನಗರ : ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಸರ್ಕಾರ ಕೂಡಲೇ ಇದನ್ನು ಪರಿಗಣಿಸಬೇಕು, ಯಾವ ಸರ್ಕಾರ ಕೂಡ ಅವರ ಸಮಸ್ಯೆ ಆಲಿಸಿಲ್ಲ. ಅವರ 36 ತಿಂಗಳ ಸಂಬಳ ಕೊಟ್ಟು ಬಿಡಿ..ಎಂದರು.
ಸಚಿವ ರಾಮಲಿಂಗಾರೆಡ್ಡಿ ಅವರು ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ರೆ ನಾವು ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಸಾರಿಗೆ ಸಂಸ್ಥೆ ನಿಗಮದ ಬಸ್ ಗಳು ಸಂಚರಿಸದೇ ಇರುವ ಕಾರಣ ಸಾರ್ವಜನಿಕರು ಇಂದು ಪರದಾಡಿದ್ದಾರೆ. ಬಸ್ ಇರದ ಹಿನ್ನೆಲೆ ಸ್ವಂತ ವಾಹನ ಹಾಗೂ ಆಟೋ, ಟ್ಯಾಕ್ಸಿ, ಕ್ಯಾಬ್ ಹತ್ತಿ ತಮ್ಮ ತಮ್ಮ ಕೆಲಸಕ್ಕೆ ಹೋಗುತ್ತಿದ್ದು, ಪರಿಣಾಮ ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.
You Might Also Like
TAGGED:ವಾಟಾಳ್ ನಾಗರಾಜ್