ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ವಿಸ್ತರಣೆಯಾಗಲಿದೆ. ಮತ್ತೆರಡು ಹೊಸ ದೂರುಗಳ ಬಗ್ಗೆ ಎಸ್ಐಟಿ ತನಿಖೆ ನಡೆಸಲಿದೆ.
ಕಾರ್ಯಾಚರಣೆ ವೇಳೆ ಪಾಯಿಂಟ್ 6ರಲ್ಲಿ ಮಾನವನ ಕಳೇಬರ ಪತ್ತೆಯಾಗಿದ್ದು, ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ಎಸ್‌ಎಟಿಗೆ ಹಸ್ತಾಂತರಿಸಲಾಗಿದೆ.
ಧರ್ಮಸ್ಥಳದಲ್ಲಿ ಪೊಲೀಸರು ಈ ಹಿಂದೆ ಪ್ರಕರಣದ ದಾಖಲಿಸಿಕೊಳ್ಳದೆ ಮೃತದೇಹ ಹೂತು ಹಾಕಿದ್ದಾರೆ ಎಂದು ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು ಸಲ್ಲಿಸಿದ್ದಾರೆ. ಜುಲೈ 31 ರಂದು 6ನೇ ಪಾಯಿಂಟ್ ನಲ್ಲಿ ಪತ್ತೆಯಾದ ಅಸ್ಥಿಪಂಜರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಈ ಎರಡು ಪ್ರಕರಣಗಳನ್ನು ಎಸ್ಐಟಿಗೆ ಹಸ್ತಾಂತರಿಸಿ ಡಿಜಿ ಐಜಿಪಿ ಆದೇಶ ಹೊರಡಿಸಿದ್ದಾರೆ.