HomeLatest NewsBREAKING: ತಡರಾತ್ರಿ ಹೋಟೆಲ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ತಲೆಗೆ ರಾಡ್ ನಿಂದ ಹೊಡೆದು...

BREAKING: ತಡರಾತ್ರಿ ಹೋಟೆಲ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ತಲೆಗೆ ರಾಡ್ ನಿಂದ ಹೊಡೆದು ಹತ್ಯೆ

ಬೆಳಗಾವಿ: ಹೋಟೆಲ್ ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಬೆಳಗಾವಿಯ ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಬಳಿ ತಡರಾತ್ರಿ ನಡೆದಿದೆ.

 ಮಹಾದೇವಿ ಕರೆಣ್ಣನವರ(42) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಅವರನ್ನು ಕೊಲೆ ಮಾಡಲಾಗಿದೆ. ಹೋಟೆಲ್ ನಲ್ಲಿ ಕೆಲಸ ಮುಗಿಸಿ ಮಹಾದೇವಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular