ಬೆಂಗಳೂರು : ರಾಜ್ಯದ 231 ಔಷಧಿ ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ. ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಜೂನ್ 24, 25 ರಂದು ಮಾದಕ ವಸ್ತು ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ 279 ಔಷಧಿ ಮಳಿಗೆಗಳನ್ನು ತಪಾಸಣೆ ನಡೆಸಿದ್ದಾರೆ.
ಈ ಪೈಕಿ ನಿಯಮ ಉಲ್ಲಂಘಿಸಿದ 231 ಔಷಧಿ ಮಳಿಗೆಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಅಂತೆಯೇ, ಔಷಧ, ಕಾಂತಿವರ್ಧಕ ಅಧಿನಿಯಮ ಉಲ್ಲಂಘಿಸಿದ ಔಷಧಿ ಅಂಗಡಿಗಳ ವಿರುದ್ಧ 29 ಕೇಸ್ ದಾಖಲಿಸಿದ್ದಾರೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

