ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಂಡಿದ್ದು, ಇಂದು ದೂರುದಾರ ನೀಡಿರುವ ಕೊನೇ ಪಾಯಿಂಟ್ ನಲ್ಲಿ ಶೋಧಕಾರ್ಯ ಆರಂಭವಾಗಿದೆ.
ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಅನಾಮಿಕ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, 13 ಸ್ಥಳಗಳನ್ನು ತೋರಿಸಿದ್ದಾನೆ. ಈ ಸ್ಥಳಗಳಲ್ಲಿ ಅಸ್ಥಿಪಂಜರಕ್ಕಾಗಿ ಎಸ್ ಐಟಿ ಶೋಧ ನಡೆಸುತ್ತಿರುವಾಗಲೇ ಗುರುತು ಮಾಡದ ಮತ್ತೊಂದು ಸ್ಥಳದಲ್ಲಿ ಶವ ಹೂತಿಟ್ಟ ಬಗ್ಗೆಯೂ ದೂರುದಾರ ಹೇಳಿಕೆ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ದೂರುದಾರ ತೋರಿಸಿರುವ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಗುರುತು ಮಾಡದ ಮತ್ತೊಂದು ಜಾಗದಲ್ಲಿಯೂ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಎರಡೂ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವರ್ಗಾಯಿಸಲಾಗಿದೆ.