HomeLatest NewsSHOCKING : ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನ್ಯಾಪ್ & ಕೊಲೆ ಕೇಸ್ ಗೆ ಬಿಗ್...

SHOCKING : ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನ್ಯಾಪ್ & ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ : ‘ಲೈಂಗಿಕ ದೌರ್ಜನ್ಯ’ ಎಸಗಿ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ 13 ವರ್ಷದ ಬಾಲಕನ ಕಿಡ್ನ್ಯಾಪ್ & ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಹೌದು, ಪ್ರಕರಣದ ಆರೋಪಿ ಗುರುಮೂರ್ತಿ ವಿಚಾರಣೆ ಮಾಡುವಾಗ ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದೆ. ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಗುರುಮೂರ್ತಿ ಮನೆಯವರಿಗೆ ಹೇಳುತ್ತಾನಂತ ಹೆದರಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಸೈಕೋ ಗುರುಮೂರ್ತಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ನಂತರ ಬಾಲಕನ ಗಂಟಲಿಗೆ ಚಾಕು ಚುಚ್ಚಿ ಕೊಲೆ ಮಾಡಿ ಶವ ಸುಟ್ಟು ಹಾಕಿದ್ದನು. ನಂತರ ಬಾಲಕನ ಪೋಷಕರಿಗೆ ಕರೆ ಮಾಡಿ ನಿನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದೇವೆ, 5 ಲಕ್ಷ ಹಣ ಕೊಟ್ಟು ಮಗನನ್ನು ಬಿಡಿಸಿಕೊಂಡು ಹೋಗಿ ಎಂದು ಡಿಮ್ಯಾಂಡ್ ಮಾಡಿ ಕಥೆ ಕಟ್ಟಿದ್ದನು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಕೆರೆಯ ವಿಜಯ ಬ್ಯಾಂಕ್ ಕಾಲೋನಿಯ ಅಚ್ಯುತ್ ರೆಡ್ಡಿ ಅವರ ಪುತ್ರ ನಿಶ್ಚಿತ್(13) ಹತ್ಯೆಯಾದ ಬಾಲಕ. ಮನೆಯ ಸಮೀಪ ಟ್ಯೂಷನ್ ಗೆ ಹೋಗಿ ಮರಳುವಾಗ ಗುರುವಾರ ಸಂಜೆ 7:30ಕ್ಕೆ ಆತನನ್ನು ಅಪಹರಿಸಿದ ದುಷ್ಕರ್ಮಿಗಳು ಬನ್ನೇರುಘಟ್ಟ ರಸ್ತೆಯ ಸಮೀಪ ಕತ್ತು ಸೀಳಿ ಕೊಲೆ ಮಾಡಿ ಶವಕ್ಕೆ ಬೆಂಕಿ ಹಚ್ಚಿದ್ದಾರೆ. ಪ್ರಕರಣ ದಾಖಲಾದ ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿ ಗುರುಮೂರ್ತಿ ಮತ್ತು ವೇಣುಗೋಪಾಲ್ ಮೇಲೆ ಫೈರಿಂಗ್ ಮಾಡಿ ಬಂಧಿಸಿದ್ದರು.

ಟ್ಯೂಷನ್ ಗೆ ಹೋಗಿದ್ದ ಬಾಲಕ ಮನೆಗೆ ಬಾರದಿದ್ದಾಗ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆ ಡಿಸಿಪಿ ನಾರಾಯಣ್ ಸೇರಿದಂತೆ ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಪೋಷಕರಿಗೆ ಕರೆ ಮಾಡಿದ್ದ ಅಪಪಹರಣಕಾರರು ಹಣಕ್ಕೆ ಒತ್ತಾಯಿಸಿದ್ದರು. ಆದರೆ, ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚುವ ವೇಳೆಗೆ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ 6 ಸುತ್ತು ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿತ್ತು.

ಆನೇಕಲ್ ತಾಲೂಕು ವ್ಯಾಪ್ತಿಯ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿತ್ತು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕ ಗುರುಮೂರ್ತಿ ಕೃತ್ಯದ ಹಿಂದಿದ್ದಾನೆ ಎಂಬುದನ್ನು ಪೊಲೀಸರು ತಿಳಿದು ಆರೋಪಿಯನ್ನು ಬಂಧಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular