ಹಾವೇರಿ : ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯಲ್ಲಿ ಆತಂಕ ಸೃಷ್ಟಿಯಾಗಿದೆ.
ನಾಡಿಗೇರಿ ಓಣಿಗೆ ಚಿರತೆ ಬಂದಿದ್ದು, ಚಿರತೆ ಸೆರೆಗೆ 200 ಅರಣ್ಯ ಇಲಾಖೆ ಸಿಬ್ಬಂದಿಗಳು ಮುಂದಾಗಿದ್ದಾರೆ. ಸಿಬ್ಬಂದಿಗಳು ಬೋನು, ಬಲೆ ಹಿಡಿದುಕೊಂಡು ಚಿರತೆ ಸೆರೆ ಹಿಡಿಯಲು ಮುಂದಾಗಿದ್ದಾರೆ. ಚಿರತೆಯನ್ನು ಸೆರೆಹಿಡಿಯವುದನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.