HomeLatest Newsಹಳ್ಳ ದಾಟಲು ಹೋಗಿ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಪಂಚಾಯತ್ ಸಿಬ್ಬಂದಿ

ಹಳ್ಳ ದಾಟಲು ಹೋಗಿ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಪಂಚಾಯತ್ ಸಿಬ್ಬಂದಿ

ಬೆಳಗಾವಿ: ಮಳೆ ಅಬ್ಬರಕ್ಕೆ ಹಳ್ಳ, ಕೊಳ್ಳ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಅಪಾಯವನ್ನೂ ಲೆಕ್ಕಿಸದೇ ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ತಾರಿಹಾಳ ಬಳಿ ನಡೆದಿದೆ.

ಪಂಚಾಯತ್ ಸಿಬ್ಬಂದಿ ಸುರೇಶ್ ನಿಜಗುಣಿ ಗುಂಡನ್ನವರ್ (50) ನೀರಿನಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ. ಪಂಚಾಯತ್ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಬೀಡುಬಿಟ್ಟಿದ್ದು, ನೋರಿನಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular