ಬೆಂಗಳೂರು: ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.
ತನು (23) ಮೃತ ಬಾಣಂತಿ. ಮಂಡ್ಯ ಮೂಲದ ತನು ಅವರನ್ನು ಹೆರಿಗೆಗಾಗಿ ನಿನ್ನೆ ಕೋಣನಕುಂಟೆ ಬಳಿಯ ಅಸ್ತ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು.
ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣ ಎಂದು ಕುಟುಂಬದವರು ಹಾಗೂ ಪೋಷಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.