HomeLatest Newsಕೇವಲ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ರಾಜ್ಯಪಾಲ ಗೆಹ್ಲೋಟ್

ಕೇವಲ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ರಾಜ್ಯಪಾಲ ಗೆಹ್ಲೋಟ್

ಕೊಪ್ಪಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೇ ಪ್ರಸಿದ್ದಿ ಪಡೆದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟವೇರಿ ಶ್ರೀ ಆಂಜನೇಯಸ್ಚಾಮಿ ದರ್ಶನ ಪಡೆದರು.

ಅಂಜನಾದ್ರಿ ಪಾದಗಟ್ಟಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ನಂತರ ಭಕ್ತಿ ಮತ್ತು ದೃಢ ಸಂಕಲ್ಪದೊಂದಿಗೆ ಕುಟುಂಬ ಸದಸ್ಯರ ಜೊತೆಗೆ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳನ್ನು 30 ನಿಮಿಷದಲ್ಲಿ ಏರಿದರು.

ನಂತರ ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ರಾಜ್ಯಪಾಲರನ್ನು ಸನ್ಮಾನಿಸಲಾಯಿತು. ನಂತರ ರಾಜ್ಯಪಾಲರು 20 ನಿಮಿಷದಲ್ಲಿ ಬೆಟ್ಟವನ್ನು ಇಳಿದರು. 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್.ಅರಸಿದ್ದಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular