HomeLatest NewsBIG NEWS: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ 184 ಜನೌಷಧ ಕೇಂದ್ರ ಬಂದ್: ದಿನೇಶ್ ಗುಂಡೂರಾವ್ ಸ್ಪಷ್ಟನೆ

BIG NEWS: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ 184 ಜನೌಷಧ ಕೇಂದ್ರ ಬಂದ್: ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ 1417 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ 184 ಕೇಂದ್ರಗಳನ್ನು ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಈ ಕುರಿತಾಗಿ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಗಳ ನಿರಾಕರಣೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ಅಧಿಕ ಜನೌಷಧ ಕೇಂದ್ರಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ.

ಔಷಧ ಖರೀದಿಸಲು ರೋಗಿಗಳು ಭರಿಸುವ ವೆಚ್ಚವನ್ನು ತಗ್ಗಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಪಡೆಯುವ ಬಡ ರೋಗಿಗಳಿಗೆ ಅನುಕೂಲವಾಗುತ್ತದೆ. ಸರ್ಕಾರಿ ಆಸ್ಪತ್ರೆಗಳ ಆವರಣಗಳ ಹೊರಗಿರುವ ಜನೌಷಧ ಕೇಂದ್ರಗಳನ್ನು ನಿರ್ಬಂಧಿಸಿಲ್ಲ. ಜನರು ತಮ್ಮ ಆಯ್ಕೆಯಂತೆ ಈ ಕೇಂದ್ರಗಳಿಗೆ ಭೇಟಿ ನೀಡಿ ಔಷದ ಪಡೆದುಕೊಳ್ಳಲು ಸ್ವತಂತ್ರರಾಗಿದ್ದಾರೆ. ಆಸ್ಪತ್ರೆ ಆವರಣದಲ್ಲಿರುವ 184 ಕೇಂದ್ರಗಳನ್ನು ಮಾತ್ರ ನಿರ್ಬಂಧಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular