ಬೆಂಗಳೂರು: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.
ಬಿಕ್ಲುಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದು, ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಆದಾಗ್ಯೂ ಆರೋಪಿ ಎಲ್ಲಿದ್ದಾನೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಈ ಹಿನ್ನೆಲೆಯಲ್ಲಿ ಸಿಐಡಿ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.
ಆರೋಪಿ ಜಗ್ಗ ವಿದೇಶದಲ್ಲಿ ಎಲ್ಲಿಯೇ ಇದ್ದರೂ ಈ ಮೂಲಕ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಸಿಐಡಿ ಶೋಧ ನಡೆಸಿದೆ.