ಬೆಂಗಳೂರು : ಆಗಸ್ಟ್ 10 ರಂದು ಬೆಂಗಳೂರಿಗೆ ‘ಪ್ರಧಾನಿ ಮೋದಿ’ ಆಗಮಿಸುತ್ತಿದ್ದು, 6 ಸ್ಥಳಗಳಲ್ಲಿ ಭರ್ಜರಿ ಸ್ವಾಗತ ಕೋರಲು ಬಿಜೆಪಿ ಸಜ್ಜಾಗಿದೆ.
ಬೆಂಗಳೂರಿನ ಪ್ರಮುಖ ನಗರಗಳಾದ ಸೌತ್ ಎಂಡ್ ಸರ್ಕಲ್, ರಾಗಿಗುಡ್ಡ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಕಡೆ ಪ್ರಧಾನಿ ಮೋದಿಗೆ ಸ್ವಾಗತ ಕೋರಲು ಬಿಜೆಪಿ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಸಭೆ ಕರೆದು ಚರ್ಚೆ ನಡೆಸಿದೆ.
ಆಗಸ್ಟ್ 10 ರಂದು ಬೆಂಗಳೂರಲ್ಲಿ ನಿಗದಿಯಾಗಿದ್ದ ಪ್ರಧಾನಿ ಮೋದಿ ರೋಡ್ ಶೋ, ಸಮಾವೇಶ ರದ್ದಾಗಿದೆ . ಸಮಯದ ಅಭಾವ ಹಿನ್ನೆಲೆ ಬಿಜೆಪಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ರದ್ದು ಮಾಡಿದೆ..ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತ್ರ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ .
ಆಗಸ್ಟ್.10 ರಂದು ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ. ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುವ ಸಾಧ್ಯತೆಯಿದೆ.
You Might Also Like
TAGGED:ಪ್ರಧಾನಿ ಮೋದಿ