HomeLatest Newsದೇವಸ್ಥಾನದಲ್ಲಿ ಕಳ್ಳತನ ಮಾಡಿ ಅನ್ಯಧರ್ಮದ ಚಿಹ್ನೆ ಬರೆದು ಪರಾರಿಯಾದ ಕಳ್ಳರು

ದೇವಸ್ಥಾನದಲ್ಲಿ ಕಳ್ಳತನ ಮಾಡಿ ಅನ್ಯಧರ್ಮದ ಚಿಹ್ನೆ ಬರೆದು ಪರಾರಿಯಾದ ಕಳ್ಳರು

ಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿ ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ಕಳ್ಳರು ಪರಾರುಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕದ್ದಿದ್ದಾರೆ. ಬಳಿಕ ದೇವಸ್ಥಾನದ ಗೋಡೆ ಮೇಲೆ 786 ಸಂಖ್ಯೆ ಹಾಗೂ ಅನ್ಯಧರ್ಮದ ಚಿಹ್ನೆ ಬರೆದು ಪರಾರಿಯಾಗಿದ್ದಾರೆ.

ಇದಕ್ಕೂ ಮುನ್ನ ಗ್ರಾಮದ ದಂಡಿಮಾರಮ್ಮ ದೇವಸ್ಥಾನಕ್ಕೂ ಕಳ್ಳರು ನುಗ್ಗಿದ್ದು, ಸ್ಥಳೀಯರೊಬ್ಬರು ದೇವಸ್ಥಾನದ ಬಳಿ ಹೋದಾಗ ಕಳ್ಳರು ಎಸ್ಕೇಪ್ ಆಗುತ್ತಿರುವುದನ್ನು ಕಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular