HomeLatest Newsಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ವಿಶ್ವ ವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ, ಕೊಡಗು ಜಿಲ್ಲೆಯ ಪ್ರಗತಿಪರ ರೈತ/ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಯಶಸ್ವಿ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಅಥವಾ https://www.uahs.edu.in ರಲ್ಲಿ ಲಭ್ಯವಿರುವ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 15, 2025 ರೊಳಗಾಗಿ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ರೈತ/ ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ಅಕ್ಟೋಬರ್-2025 ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರಧಾನ ಮಾಡಲಾಗುವುದು ಎಂದು ವಿಸ್ತರಣಾನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರುಗಳು, ಕೃಷಿ ವಿಜ್ಞಾನ ಕೇಂದ್ರ, ದೂ.ಸಂ.: ಶಿವಮೊಗ್ಗ- 9480838976, 8277932600, ದಾವಣಗೆರೆ-9480838209, ಚಿಕ್ಕಮಗಳೂರು- 9480838203, 8277930890, ಉಡುಪಿ-9480838202, 8277932500, ಚಿತ್ರದುರ್ಗ-9480838201, ದಕ್ಷಿಣಕನ್ನಡ- 8794706468, 8277931060, ಮಡಿಕೇರಿ- 9480838210, 7259005540 ಗಳನ್ನು ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular