HomeLatest NewsSHOCKING: ಬೆಂಗಳೂರಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಬಾಲಕ ಬಲಿ: ತಂಗಿ ಮಗನ ಕೊಂದು ಠಾಣೆಗೆ ಶರಣಾದ...

SHOCKING: ಬೆಂಗಳೂರಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಬಾಲಕ ಬಲಿ: ತಂಗಿ ಮಗನ ಕೊಂದು ಠಾಣೆಗೆ ಶರಣಾದ ಮಾವ

ಬೆಂಗಳೂರು: ಬೆಂಗಳೂರಿನಲ್ಲಿ ಫ್ರೀ ಫೈರ್ ಗೇಮ್ ಗೆ 14 ವರ್ಷದ ಬಾಲಕ ಅಮೋಘ ಕೀರ್ತಿ ಬಲಿಯಾಗಿದ್ದಾನೆ. ಬಾಲಕನ ಕೊಲೆ ಮಾಡಿ ಮಾವ ನಾಗಪ್ರಸಾದ್ ಸೋಲದೇವನಹಳ್ಳಿ ಠಾಣೆಗೆ ಶರಣಾಗಿದ್ದಾನೆ.

ಆನ್ಲೈನ್ ಗೇಮ್ ಚಟಕ್ಕೆ ಬಿದ್ದಿದ್ದ ಬಾಲಕ ಪದೇ ಪದೇ ಹಣ ಕೇಳುತ್ತಿದ್ದ ಎನ್ನಲಾಗಿದ್ದು, ಕೋಪದ ಭರದಲ್ಲಿ ಮಾವನೇ ಕೊಲೆ ಮಾಡಿದ್ದಾನೆ.

14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ ಎಂದು ಹೇಳಲಾಗಿದೆ. ಎಂಟು ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಾಗಿದ್ದ ಬಾಲಕ ವಾಸವಾಗಿದ್ದ. ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ. ಮಾವನಿಗೆ ಪದೇ ಪದೇ ಹಣ ಕೇಳುತ್ತಿದ್ದ. ಇದರಿಂದ ಕೋಪಗೊಂಡ ನಾಗಪ್ರಸಾದ್ ಸೋಮವಾರ ರಾತ್ರಿ ತಂಗಿ ಮಗನ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂತರ ಮೆಜೆಸ್ಟಿಕ್ ನಲ್ಲಿ 3ದಿನ ಕಾಲ ಕಳೆದಿದ್ದಾನೆ. ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ವಾಯುವ್ಯ ವಿಭಾಗದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆನ್ಲೈನ್ ಚಟಕ್ಕೆ ಬಿದ್ದು ಹಣಕ್ಕಾಗಿ ಪೀಡಿಸುತ್ತಿದ್ದ ತಂಗಿ ಮಗನ ಕಾಟ ಸಹಿಸಲಾರದೆ ನಾಗಪ್ರಸಾದ್ ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular