HomeLatest Newsವಿವಾಹಿತ ಪುತ್ರಿಗೂ ಅನುಕಂಪದ ಉದ್ಯೋಗ, ಸಹಕಾರ ಸಂಘ ಅಧ್ಯಕ್ಷರ ಹುದ್ದೆಗೂ ಮೀಸಲಾತಿ, ಎಲೆಕ್ಟ್ರಿಕ್ ವಾಹನ ಖರೀದಿಗೆ...

ವಿವಾಹಿತ ಪುತ್ರಿಗೂ ಅನುಕಂಪದ ಉದ್ಯೋಗ, ಸಹಕಾರ ಸಂಘ ಅಧ್ಯಕ್ಷರ ಹುದ್ದೆಗೂ ಮೀಸಲಾತಿ, ಎಲೆಕ್ಟ್ರಿಕ್ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ ಸೇರಿ 17 ಬಿಲ್ ಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವ್ಯವಸ್ಥೆ ಅಳವಡಿಕೆಗೆ ಅವಕಾಶ ಕಲ್ಪಿಸುವುದು, ಒಬಿಸಿ ನಿರುದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಗೆ ಸಹಾಯಧನ ದೇವದಾಸಿಯರ ಮಕ್ಕಳ ಕಲ್ಯಾಣಕ್ಕೆ ವಿವಿಧ ಸೌಲಭ್ಯ ಸೇರಿದಂತೆ 17 ವಿಧೇಯಕಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಸಹಕಾರ ಸಂಘಗಳು ಸೌಹಾರ್ದ ಸಹಕಾರಿ ಸಂಘಗಳಲ್ಲಿ ಪ್ರಾತಿನಿಧ್ಯವಿಲ್ಲದ ಸಮುದಾಯಗಳಿಗೂ ಸ್ಥಾನಮಾನ ಕಲ್ಪಿಸಲು ಆಯ್ದ ನಿರ್ದೇಶಕ ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಸರ್ಕಾರ ಮುಂದಾಗಿತ್ತು. ಈ ನಾಮನಿರ್ದೇಶಕ ಸದಸ್ಯರಿಗೆ ಮತದಾನದ ಹಕ್ಕು ಕಲ್ಪಿಸಿ ಉಭಯ ಸದನಗಳಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅಂಕಿತಕ್ಕೆ ರವಾನಿಸಲಾಗಿತ್ತು. ನಂತರ ವಿಧೇಯಕವನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದ ಹಿನ್ನೆಲೆಯಲ್ಲಿ ನಾಮನಿರ್ದೇಶಕ ಸದಸ್ಯರಿಗೆ ಮತದಾನದ ಹಕ್ಕು ನೀಡುವ ಪ್ರಸ್ತಾಪವನ್ನು ಸರ್ಕಾರ ತಿದ್ದುಪಡಿ ವಿಧೇಯಕದಲ್ಲಿ ಕೈಬಿಟ್ಟಿದೆ. ಈ ಸಂಘಗಳ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನೀಡಲು ಅವಕಾಶ ಕಲ್ಪಿಸುವ ಅಂಶವು ತಿದ್ದುಪಡಿ ವಿಧೇಯಕದಲ್ಲಿದೆ.

ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನ ಖರೀದಿಸಿ ಆಹಾರ ಕಿಯೋಸ್ಕ್ ಪ್ರಾರಂಭಿಸಲು ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸಹಾಯಧನ ಮಿತಿಯಲ್ಲಿ 1103 ವಾಹನ ಒದಗಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವಾಹಿತ ಪುತ್ರಿಗೂ ಅನುಕಂಪದ ಉದ್ಯೋಗ ನೀಡಲಾಗುವುದು. ಕುಟುಂಬ ಸದಸ್ಯರು ಎಂಬ ವ್ಯಾಖ್ಯಾನದಲ್ಲಿ ಸಹೋದರರು, ಸಹೋದರಿಯರು, ಮೊಮ್ಮಗ, ಅವಿವಾಹಿತ ಮೊಮ್ಮಗಳು, ಸೊಸೆ, ವಿಧವಾ ಮಗಳು, ವಿಧವಾ ಮೊಮ್ಮಗಳು ಎಂಬ ಪದಗಳ ನಂತರ ವಿವಾಹಿತ ಮಗಳೆಂಬ ಪದಗಳನ್ನು ಸೇರಿಸುವ ಸಂಬಂಧ ನಿಯಮಾವಳಿ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ. ಇದರಿಂದ ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ ಸಿಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular