BIG NEWS : ಬೆಂಗಳೂರಲ್ಲಿ ಇಂದು ‘ರಾಹುಲ್ ಗಾಂಧಿ’ ಪ್ರತಿಭಟನೆ : ಹಲವೆಡೆ ವಾಹನ ಸಂಚಾರ ನಿಷೇಧ , ಬಿಗಿ ಪೊಲೀಸ್ ಭದ್ರತೆ.!

ಬೆಂಗಳೂರು :  ಬೆಂಗಳೂರಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು,  ಹಲವೆಡೆ ವಾಹನ ಸಂಚಾರ ನಿಷೇಧಿಸಲಾಗಿದೆ.  ಹಾಗೂ  ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು   ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ನಡೆಸಲಿದೆ. ಈ ಸಮಾವೇಶಕ್ಕೆ ವೋಟ್ ಅಧಿಕಾರ್ ರ್ಯಾಲಿ ಎಂದು ಹೆಸರಿಸಲಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ  ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಭಾರತದಲ್ಲಿ ಚುನಾವಣೆಯನ್ನೇ ಕದಿಯಲಾಗುತ್ತಿದೆ ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಇದರ ವಿರುದ್ಧ ಹೋರಾಟಕ್ಕೆ ಬೆಂಗಳೂರಿನಿಂದಲೇ ಚಾಲನೆ ನೀಡಲಿದ್ದಾರೆ. ಪ್ರತಿಭಟನಾ ಸಮಾವೇಶದಲ್ಲಿ ಪ್ರತಿ ಕ್ಷೇತ್ರದಿಂದ 50 ಮಂದಿ ಕರೆತರಬೇಕು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪ್ರಮುಖ ನಾಯಕರು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚನೆ ನೀಡಲಾಗಿದೆ .
ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

ಬೆಂಗಳೂರಿನಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ದಿನಾಂಕ: 08.08.2025 ರಂದು ಅತಿಗಣ್ಯ ವ್ಯಕ್ತಿಗಳು ಭೇಟಿ ನೀಡಲಿರುವ ಪ್ರಯುಕ್ತ ಈ ಕೆಳಕಂಡ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಮತ್ತು ಈ ಕೆಳಕಂಡ ಸಮಯದ ಅವಧಿಯಲ್ಲಿ ಈ ಕೆಳಕಂಡ ರಸ್ತೆಗಳ ಬದಲಾಗಿ ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿದೆ.

ಬೆಳಗ್ಗೆ 10:30 ಗಂಟೆಯಿಂದ 11:30 ಗಂಟೆಯವರೆಗೆ

ಹಳೆ ವಿಮಾನ ನಿಲ್ದಾಣ ರಸ್ತೆ.
ಎಂ.ಜಿ.ರಸ್ತೆ.
ಕಬ್ಬನ್ ರಸ್ತೆ.
ಸಂಜೆ 03:30 ಗಂಟೆಯಿಂದ 04:30 ಗಂಟೆಯವರೆಗೆ
ಹಳೆ ವಿಮಾನ ನಿಲ್ದಾಣ ರಸ್ತೆ.
ಎಂ.ಜಿ.ರಸ್ತೆ.

ಕಬ್ಬನ್ ರಸ್ತೆ.

ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್ನಲ್ಲಿ ದಿನಾಂಕ 08.08.2025 ರಂದು ಪ್ರತಿಭಟನೆಯನ್ನು ಇರುವುದರಿಂದ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ.

ನಿರ್ಬಂದಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ
ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್ ನಿಂದ ಆನಂದ ರಾವ್ ಪ್ರೈ ಓವರ್, ಓಲ್ಡ್ ಜೆ.ಡಿ.ಎಸ್. ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು
ಲುಲು ಮಾಲ್, ಕೆಎಫ್ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಪ್ರೈ ಓವರ್. ರೇಸ್ ಕೋರ್ಸ್ ರಸ್ತೆ ಮೂಲಕ ಸಂಚರಿಸುವುದು.
ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ
ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಪ್ರೈ ಓವರ್ ರಸ್ತೆ ಮೂಲಕ ಸಂಚರಿಸುವುದು.
ಚಾಲುಕ್ಯ ಸರ್ಕಲ್ ನಿಂದ ಮೈಸೂರು ಬ್ಯಾಂಕ್ ಕಡೆಗೆ
ಚಾಲುಕ್ಯ ಸರ್ಕಲ್, ಎಲ್ಆರ್ಡಿ, ರಾಜಭವನ ರಸ್ತೆ, ಇನ್ ಪೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ ನಿಂದ ತೆರಳುವುದು.
ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು
ಕನಕದಾಸ ಜಂಕ್ಷನ್ ಬಲ ತಿರುವು ಪಡೆದು ಸಾಗರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.
ಮೌರ್ಯ/ಸುಬ್ಬಣ್ಣ ಜಂಕ್ಷನ್ ನಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು
ಸುಬ್ಬಣ್ಣ ಜಂಕ್ಷನ್ ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read