ಧರ್ಮಸ್ಥಳ ಪ್ರಕರಣ: ಮಾನಹಾನಿಕರ ವರದಿ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ರಾಜ್ಯ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿ ತಡೆಗೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ರಾಜ್ಯ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ.

ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನು ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೊರ್ಟ್ ದ್ವಿಸದಸ್ಯ ಪೀಠ, ಮಾನಹಾನಿಕಾರಕ ಪೋಸ್ಟ್ ಗಳಿಗೆ ದೇವಾಲಯ ಯಾವಾಗಲೂ ಪರಿಹಾರ ಪಡೆಯಬಹುದು ಎಂದಿದೆ. ಆದಾಗ್ಯೂ ಮಾಧ್ಯಮಗಳ ವಿರುದ್ಧ ನಿಗ್ರಹ ಹೇರಬೇಕೇ? ಎಂದು ಪ್ರಶ್ನಿಸಿದ ಪೀಠ, ವಿರಳ ಹಾಗೂ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಗ್ಯಾಗ್ ಆದೇಶಗಳನ್ನು ಹೊರಡಿಸಲಾಗುತ್ತದೆ. ಇಂತಹ ಆದೇಶ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತವೆ. ನಾವು ತಡೆಯಾಜ್ಞೆ ನೀಡಿದರೆ ಅನಾಮಿಕ ವ್ಯಕ್ತಿಯ ಹೇಳಿಕೆಯನ್ನು ಸಹ ವರದಿ ಮಾಡಲು ಸಾಧ್ಯವಿಲ್ಲ. ಈ ವಿಷಯವನ್ನು ರಾಜ್ಯದ ವಿಚಾರಣಾ ನ್ಯಾಯಾಲಯವೇ ಪರಿಗಣಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕದ ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿದಾರರು ಮತ್ತೆ ವಾದ ಮಂಡಿಸಲಿ. ವಿಚಾರಣಾ ನ್ಯಾಯಾಲಯ ಈ ವಿಚಾರದಲ್ಲಿ ಸ್ವತಂತ್ರ ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಿದೆ. ವಿಚಾರಣಾ ನ್ಯಾಯಾಲಯ ಮುಂದಿನ ಎರಡು ವಾರಗಳಲ್ಲಿ ಅರ್ಜಿಯನ್ನು ನಿರ್ಧರಿಸುವಂತೆ ನಾವು ನಿರ್ದೇಶಿಸುತ್ತೇವೆ. ಹೈಕೋರ್ಟ್ ನೀಡುವ ಯಾವುದೇ ಆದೇಶ ವಿಚಾರಣಾ ನ್ಯಾಯಾಲಯದ ಮೇಲೆ ಪ್ರಭಾವ ಬೀರಲ್ಲ ಎಂದು ಸ್ಪಷ್ಟಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read