HomeLatest Newsಸ್ಕೂಟರ್ ಗೆ KSRTC ಬಸ್ ಡಿಕ್ಕಿ: ಹೆಲ್ಮೆಟ್ ಧರಿಸಿದ್ದರೂ ತಲೆ ಮೇಲೆ ಬಸ್ ಚಕ್ರ ಹರಿದು...

ಸ್ಕೂಟರ್ ಗೆ KSRTC ಬಸ್ ಡಿಕ್ಕಿ: ಹೆಲ್ಮೆಟ್ ಧರಿಸಿದ್ದರೂ ತಲೆ ಮೇಲೆ ಬಸ್ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವು

ದಾವಣಗೆರೆ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಸ್ಕೂಟರ್ ನಲ್ಲಿದ್ದ ಆರ್.ಟಿ.ಒ. ಅಧೀಕ್ಷಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ರಿಂಗ್ ರೋಡ್ ನವೋದಯ ಶಾಲೆಯ ಎದುರು ಘಟನೆ ನಡೆದಿದೆ.

ಆರ್‌ಟಿಒ ಕಚೇರಿ ಅಧೀಕ್ಷಕ ತಿಪ್ಪೇಸ್ವಾಮಿ(43) ಮೃತಪಟ್ಟವರು ಎಂದು ಹೇಳಲಾಗಿದೆ. ರಿಂಗ್ ರೋಡ್ ನಲ್ಲಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತಿಪ್ಪೇಸ್ವಾಮಿ ರಸ್ತೆಗೆ ಬಿದ್ದಿದ್ದಾರೆ. ಹೆಲ್ಮೆಟ್ ಧರಿಸಿದ್ದರೂ ಬಸ್ ಟೈಯರ್ ಅವರ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಶಿವನಿ ಮೂಲದ ತಿಪ್ಪೇಸ್ವಾಮಿ ದಾವಣಗೆರೆ ಆರ್.ಟಿ.ಒ. ಕಚೇರಿ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಡಿವೈಎಸ್ಪಿ ಶರಣಬಸವೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular