ಚಿಕ್ಕಮಗಳೂರು: ಪತ್ನಿಯನ್ನು ಹತ್ಯೆ ಮಾಡಿದ್ದ ಪತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೈಕ್ ನಲ್ಲಿ ತೆರಳುವಾಗ ಮಚ್ಚಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ.
26 ವರ್ಷದ ಚರಣ್ ಎಂಬುವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬಾವಿಕೆರೆಯ ಬಳಿ ಘಟನೆ ನಡೆದಿದೆ.
ಪತ್ನಿ ಮೇಘನಾಳನ್ನು ಕೊಲೆ ಮಾಡಿ ಜೈಲು ಸೇರಿದ್ದ ಚರಣ್ ಮೂರು ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಬೈಕ್ ನಲ್ಲಿ ತೆರಳುವಾಗ ಹಂತಕರು ಚರಣ್ ಅನ್ನು ಮಾರಕಾಸ್ತ್ರದಿಂದ ಥಳಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.