HomeLatest NewsBIG NEWS: 1650 ಕೋಟಿ ರೂ. ವೆಚ್ಚದಲ್ಲಿ 100 ಎಕರೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ...

BIG NEWS: 1650 ಕೋಟಿ ರೂ. ವೆಚ್ಚದಲ್ಲಿ 100 ಎಕರೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಒಪ್ಪಿಗೆ

ಬೆಂಗಳೂರು: ಸೂರ್ಯ ನಗರದಲ್ಲಿ 100 ಎಕರೆ ವಿಸ್ತೀರ್ಣದಲ್ಲಿ 1650 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯ ವತಿಯಿಂದ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಗೃಹ ಮಂಡಳಿಯ ಅಧಿಕಾರಿಗಳು ಕ್ರೀಡಾಂಗಣದ ಕುರಿತು ಪ್ರಾತ್ಯಕ್ಷಿಕೆ ನೀಡಿದ್ದಾರೆ. 80,000 ಪ್ರೇಕ್ಷಕರು ಕುಳಿತುಕೊಳ್ಳಬಹುದಾದ ಕ್ರಿಕೆಟ್ ಮೈದಾನ, 8 ಒಳಾಂಗಣ ಕ್ರೀಡೆಗಳ ಕ್ರೀಡಾಂಗಣ, 8 ಹೊರಾಂಗಣ ಕ್ರೀಡೆಗಳ ಕ್ರೀಡಾಂಗಣಗಳು, ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಹಾಸ್ಟೆಲ್, ಅಂತರಾಷ್ಟ್ರೀಯ ಕ್ರೀಡಾಪಟುಗಳಿಗೆ ಅತಿಥಿ ಗೃಹಗಳು ಇರಲಿವೆ.

ಕರ್ನಾಟಕ ಗೃಹ ಮಂಡಳಿಯಿಂದಲೇ ಯೋಜನೆ ಅನುಷ್ಠಾನಗೊಳಿಸಲಾಗುವುದು. ಕೆಲವೇ ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಕ್ರೀಡಾಂಗಣ ನಿರ್ಮಿಸುವ ಜೊತೆಗೆ ನಿರ್ವಹಣೆಗೂ ಗೃಹ ಮಂಡಳಿಯ ಅಧಿಕಾರಿಗಳು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರಾದ ಜಮೀರ್ ಅಹ್ಮದ್, ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಹಲವರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular