ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನ ಮಾಡುವಂತೆ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು ಮಾಡಿದೆ.
ರಾಷ್ಟ್ರೀಯ ಶಿಕ್ಷಣ ನೀತಿ -2020 ಬದಲಿಗೆ ರಾಜ್ಯಕ್ಕೆ ಪ್ರತ್ಯೇಕವಾದ ಶಿಕ್ಷಣ ನೀತಿ ರೂಪಿಸಲು ಪ್ರೊ. ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ಸರ್ಕಾರ ರಚಿಸಿತ್ತು.
2197 ಪುಟಗಳಿರುವ ಮೂರು ಸಂಪುಟ ಒಳಗೊಂಡ ಅಂತಿಮ ವರದಿಯನ್ನು ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಮೂರು ಸಂಪುಟಗಳನ್ನು ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ವೃತ್ತಿ ಶಿಕ್ಷಣ ಎಂದು ವರ್ಗೀಕರಣ ಮಾಡಲಾಗಿದೆ.
ತೃತೀಯ ಭಾಷೆಯಾಗಿ ಹಿಂದಿ ಕಲಿಸುವ ಬಗ್ಗೆ ಆಯೋಗ ಪ್ರಸ್ತಾಪಿಸಿಲ್ಲ. ಕನ್ನಡ ಸೇರಿ ಇತರೆ ಮಾತೃಭಾಷೆಗಳನ್ನು ಪ್ರಥಮ ಭಾಷೆಯಾಗಿ, ಇಂಗ್ಲೀಷ್ ಅನ್ನು ದ್ವಿತೀಯ ಭಾಷೆಯಾಗಿ ನಿಗದಿಪಡಿಸಬೇಕು. ಈ ನಿಯಮವನ್ನು ಸರ್ಕಾರಿ, ಅನುದಾನಿತ ಹಾಗೂ ಎಲ್ಲಾ ಶಾಲೆಗಳಲ್ಲೂ ಅನುಷ್ಠಾನಗೊಳಿಸಬೇಕು. ಐದನೇ ತರಗತಿವರೆಗೆ ಮಾತೃಭಾಷೆಯಲ್ಲಿ ಬೋಧನೆಗೆ ಅವಕಾಶ ನೀಡಬೇಕೆಂದು ಶಿಫಾರಸು ಮಾಡಲಾಗಿದೆ.
ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಆಯೋಗದವರು ಇಂದು ತಮ್ಮ ವರದಿಯನ್ನು ಮುಖ್ಯಮಂತ್ರಿ @siddaramaiah ಅವರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಲ್ಲಿಸಿದರು. pic.twitter.com/qUXBV3r11c
— CM of Karnataka (@CMofKarnataka) August 8, 2025