BREAKING: ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮ, 3 ಭಯೋತ್ಪಾದಕರು ಫಿನಿಶ್: 9 ಸೈನಿಕರಿಗೆ ಗಾಯ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಆಪರೇಷನ್ ಅಖಾಲ್ ಕಾರ್ಯಾಚರಣೆಯಲ್ಲಿ ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಮತ್ತು ಸಿಪಾಯಿ ಹರ್ಮಿಂದರ್ ಸಿಂಗ್ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ನಲ್ಲಿ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ಇದುವರೆಗೆ ಒಬ್ಬ ಭಯೋತ್ಪಾದಕನ ಮೃತದೇಹ ಪತ್ತೆಯಾಗಿರುವ ಬಗ್ಗೆ ಅಧಿಕೃತ ದೃಢೀಕರಣ ಮಾತ್ರ ಬಂದಿದೆ.

ಎನ್‌ಕೌಂಟರ್‌ನಲ್ಲಿ ಇಬ್ಬರು ಸೈನಿಕರು ಬಲಿಯಾಗಿದ್ದು, ಇತರ 9 ಯೋಧರು ಗಾಯಗೊಂಡಿದ್ದಾರೆ.

ರಾಷ್ಟ್ರಕ್ಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧೈರ್ಯಶಾಲಿಗಳಾದ ಎಲ್/ಎನ್‌ಕೆ ಪ್ರೀತ್ಪಾಲ್ ಸಿಂಗ್ ಮತ್ತು ಹರ್ಮಿಂದರ್ ಸಿಂಗ್ ಅವರ ಅತ್ಯುನ್ನತ ತ್ಯಾಗವನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಅವರ ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ. ಭಾರತೀಯ ಸೇನೆ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ ಮತ್ತು ಮೃತರ ಕುಟುಂಬಗಳೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ. ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಕಾರ್ಯಾಚರಣೆಯ ವಿವರಗಳನ್ನು ಭಾರತೀಯ ಸೇನೆ ಹಂಚಿಕೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read