ಬಾಗಲಕೋಟೆ: ರ್ಯಾಗಿಂಗ್ ನಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ ಮೃತಪಟ್ಟವರು ಎಂದು ಹೇಳಲಾಗಿದೆ. ಸಹಪಾಠಿ ವರ್ಷಾ ಮತ್ತು ಪ್ರದೀಪ್ ರ್ಯಾಗಿಂಗ್ ಮಾಡಿರುವುದಾಗಿ ವಿದ್ಯಾರ್ಥಿನಿ ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.
ಗುಳೇದಗುಡ್ಡದ ಭಂಡಾರಿ ಕಾಲೇಜಿನ ವಿದ್ಯಾರ್ಥಿನಿ ಅಂಜಲಿ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು, ಸಹಪಾಠಿಗಳ ಕಿರಕುಳಕ್ಕೆ ಬಲಿಯಾಗಿದ್ದಾರೆ. ಡೆತ್ ನೋಟ್ ನಲ್ಲಿ ತಮಗೆ ಕಿರುಕುಳ ನೀಡಿದ ಬಗ್ಗೆ ಉಲ್ಲೇಖಿಸಿರುವ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಕ್ರಮ ಕೈಗೊಂಡಿದ್ದಾರೆ.