ಚಿತ್ರದುರ್ಗ: ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮಾಡನಾಯಕನಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲುಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮಾಡನಾಯಕನಹಳ್ಳಿ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.