ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಉಗ್ರರು ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಕುಲ್ಗಾಮ್ ನಲ್ಲಿ ರಾತ್ರಿಯಿಡಿ ಆಪರೇಷನ್ ಅಖಾಲ್ ಕಾರ್ಯಾಚರಣೆ ನಡೆಸಲಾಗಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಲಾರೆನ್ಸ್ ನಾಯಕ್ ಪ್ರೀತ್ಪಾಲ್ ಹಾಗೂ ಸಿಪಾಯಿ ಹರ್ಮಿಂದರ್ ಸಿಂಗ್ ಹುತಾತ್ಮ ಯೋಧರು. ಹುತಾತ್ಮ ಯೋಧರ ಧೈರ್ಯ ಹಾಗೂ ಸಮರ್ಪಣೆ ನಮಗೆ ಶಾಶ್ವತ ಸ್ಫೂರ್ತಿ ನೀಡುತ್ತದೆ ಎಂದು ಭಾರತೀಯ ಸೇನೆ ಸಂತಾಪ ಸೂಚಿಸಿದೆ.
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ 9 ಯೋಧರು ಗಾಯಗೊಂಡಿದ್ದಾರೆ. ಸೇನಾ ಕಾರ್ಯಾಚರಣೆ ಮುಂದುವರೆದಿದೆ