HomeLatest NewsBREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದಲ್ಲಿ ಅಸ್ಥಿಪಂಜರಕ್ಕಾಗಿ ಶೋಧಕಾರ್ಯ

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದಲ್ಲಿ ಅಸ್ಥಿಪಂಜರಕ್ಕಾಗಿ ಶೋಧಕಾರ್ಯ

ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಂದು ಹೊಸ ಜಾಗದಲ್ಲಿ ಎಸ್ ಐಟಿ ತಂಡ ಶೋಧಕಾರ್ಯ ಆರಂಭಿಸಿದೆ.

ದೂರುದಾರ ತೋರಿಸಿರುವ 16ನೇ ಪಾಯಿಂಟ್ ನಲ್ಲಿ ಎಸ್ ಐಟಿ ತಂಡ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯ ನಡೆಸಿದೆ. ನಿನ್ನೆ 13ನೇ ಪಾಯಿಂಟ್ ನಲ್ಲಿ ಶೋಧ ನಡೆಸುವ ನಿರೀಕ್ಷೆ ಇತ್ತು. ಆದರೆ ಹೊಸದೊಂದು ಸ್ಥಳ 15ನೇ ಪಾಯಿಂಟ್ ನಲ್ಲಿ ಎಸ್ ಐಟಿ ಶೋಧ ನಡೆಸಿತ್ತು. ಇದೀಗ ದೂರುದಾರ ತೋರಿಸಿರುವ 16ನೇ ಪಾಯಿಂಟ್ ನಲ್ಲಿ ಉತ್ಖನನ ನಡೆಸಲಾಗುತ್ತಿದೆ.

ಮಾಸ್ಕ್ ಮ್ಯಾನ್ ದೂರುದಾರ ತೋರಿಸಿರುವ ಜಾಗ ಧರ್ಮಸ್ಥಳದ ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ ತಪ್ಪಲಿನಲ್ಲಿ 16ನೇ ಪಾಯಿಂಟ್ ಎಂದು ಗುರುತಿಸಿ ಶೋಧಕಾರ್ಯಾಚರಣೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular