ಬೆಂಗಳೂರು: ಬಸ್ ನಿಲ್ದಾಣದ ಮೇಲಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ.
ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದ ಮೇಲಿಂದ ಬಿದ್ದು ಯುವತಿ ಮೃತಪಟ್ಟಿದ್ದಾರೆ. ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಮತ್ತೊಂದೆಡೆ ಯುವತಿ ಯಾರು? ಬಸ್ ನಿಲ್ದಾಣದ ಮೇಲಿಂದ ಬೀಳಲು ಕಾರಣವೇನು? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.