HomeLatest News'ಮಿಷನ್ ಶಕ್ತಿ ಯೋಜನೆ' ಯಡಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನ

‘ಮಿಷನ್ ಶಕ್ತಿ ಯೋಜನೆ’ ಯಡಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲಾ ಸಂಯೋಜಕರು, ಲಿಂಗ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕರು , ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರು ಮತ್ತು ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜನಕರ ಹುದ್ದೆಗೆಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಜಿಲ್ಲಾ ಸಂಯೋಜಕರ ಹುದ್ದೆಗೆ ಸಮಾಜ ವಿಜ್ಞಾನ / ಜೀವ ವಿಜ್ಞಾನ / ಪೌಷ್ಠಿಕಾಂಶ / ಆರೋಗ್ಯ ನಿರ್ವಹಣೆ / ಸಮಾಜ ಕಾರ್ಯ ಮತ್ತು ಗ್ರಾಮೀಣ ನಿರ್ವಹಣೆಯಲ್ಲಿ ಪದವಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ಕನ್ನಡ ಮತ್ತು ಇಂಗ್ಲೀಷ್‍ ಬೆರಳಚ್ಚು , ಗೂಗಲ್‍ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಲಿಂಗ ತಜ್ಞರು ಹುದ್ದೆಗೆ ಸಮಾಜ ಕಾರ್ಯ / ಇತರ ಸಮಾಜಿಕ ವಿಷಯಗಳಲ್ಲಿ ಪದವಿ ಪಡೆದವರಿಗೆ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ಕನ್ನಡ ಮತ್ತು ಇಂಗ್ಲೀಷ್‍ ಬೆರಳಚ್ಚು , ಗೂಗಲ್‍ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕರ ಹುದ್ದೆಗೆ ಸಮಾಜ ವಿಜ್ಞಾಬ / ಜೀವ ವಿಜ್ಞಾನ/ ಪೌಷ್ಠಿಕಾಂಶ / ವೈದ್ಯಕೀಯ / ಆರೋಗ್ಯ ನಿರ್ವಹಣೆ/ ಸಮಾಜ ಕಾರ್ಯ ಮತ್ತು ಗ್ರಾಮೀಣ ನಿರ್ಹಹಣೆಯಲ್ಲಿ ಪದವಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ಕನ್ನಡ ಮತ್ತು ಇಂಗ್ಲೀಷ್‍ ಬೆರಳಚ್ಚು , ಗೂಗಲ್‍ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರ ಹುದ್ದೆಗೆ ಅರ್ಥಶಾಸ್ತ್ರ, ಬ್ಯಾಂಕಿಂಗ್ , ಇತರೆ ವಿಭಾಗಗಳಲ್ಲಿ ಪದವೀಧರರು, ಸ್ನಾತಕೋತ್ತರ ಪದವಿ ಹೊಂದಿದವರಿಗೆ ಅದ್ಯತೆ. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜನಕರ ಹುದ್ದೆಗೆ ಕಂಪ್ಯೂಟರ್/ಐಟಿ ಇತ್ಯಾದಿಗಳಲ್ಲಿ ಕೆಲಸ ಮಾಡುವ ಜ್ಞಾನದೊಂದಿಗೆ ಪದವಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರ (Resume) ವನ್ನು ಎಲ್ಲಾ ದಾಖಲೆಗಳೊಂದಿಗೆ ಸೆಪ್ಟೆಂಬರ್ 05, 2025 ರೊಳಗೆ ಸಲ್ಲಿಸಬಹುದು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26578688 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular