HomeLatest Newsರೈತರಿಗೆ ಗುಡ್ ನ್ಯೂಸ್: ಆಧಾರ್, ಪಹಣಿ ಜೆರಾಕ್ಸ್ ನೀಡಿ ರಸಗೊಬ್ಬರ ಪಡೆದುಕೊಳ್ಳಿ

ರೈತರಿಗೆ ಗುಡ್ ನ್ಯೂಸ್: ಆಧಾರ್, ಪಹಣಿ ಜೆರಾಕ್ಸ್ ನೀಡಿ ರಸಗೊಬ್ಬರ ಪಡೆದುಕೊಳ್ಳಿ

ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ ಆಗಸ್ಟ್ 11ರ ಸೋಮವಾರದಂದು ಯೂರಿಯಾ ರಸಗೊಬ್ಬರದ ವಿತರಣೆ ಮಾಡಲಾಗುತ್ತಿದೆ.

ಯೂರಿಯಾ ಖರೀದಿಸಲು ಇಚ್ಛಿಸುವ ರೈತರು ಕಡ್ಡಾಯವಾಗಿ ಜಮೀನು ಹೊಂದಿರುವ ರೈತನ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಹಾಗೂ ಜಮೀನಿನ ಪಹಣಿ ಜೆರಾಕ್ಸ್ ಪ್ರತಿ ತರಬೇಕು.

ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಯೂರಿಯಾ ರಸಗೊಬ್ಬರ ವಿತರಣೆ ಮಾಡಲಾಗುವುದು. ಈ ಹಿಂದೆ ಯೂರಿಯಾ ರಸಗೊಬ್ಬರ ಖರೀದಿಸಿದ ರೈತರಿಗೆ ಪುನಃ ಯೂರಿಯಾ ರಸಗೊಬ್ಬರ ವಿತರಿಸುವುದಿಲ್ಲ. ರೈತರ ಹೆಸರಿನಲ್ಲಿ ವಂಚನೆ ಎಸಗುವವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular