ಬೆಂಗಳೂರು: ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ.
ಆಗಸ್ಟ್ 11 ರಿಂದ 22ರ ವರೆಗೆ ಅಧಿವೇಶನ ನಡೆಯಲಿದ್ದು, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿವೆ. ಸುಗಮ ಕಲಾಪಕ್ಕೆ ಮತ್ತು ಪ್ರತಿ ಪಕ್ಷಗಳಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ಕೂಡ ಸಜ್ಜಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಸೇರಿ ಮೂರು ದಿನ ರಜೆ ಇರುವುದರಿಂದ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ. ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ವಿಪಕ್ಷಗಳು ಸಜ್ಜಾಗಿವೆ.