HomeLatest NewsBREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಹೊಸ ತಿರುವು: ಪತ್ನಿ ಹಲ್ಲೆಯ ವಿಡಿಯೋ...

BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಹೊಸ ತಿರುವು: ಪತ್ನಿ ಹಲ್ಲೆಯ ವಿಡಿಯೋ ವೈರಲ್

ಕಾರವಾರ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ.

ಪೊರಕೆ, ಕಟ್ಟಿಗೆಯಿಂದ ಚಂದ್ರಶೇಖರ ಸಿದ್ದಿಗೆ ಪತ್ನಿ ಹಲ್ಲೆ ಮಾಡಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ನಂತರ ಚಂದ್ರಶೇಖರ ಸಿದ್ದಿ ಕಾಮಿಡಿ ಶೋ, ಕೆಲವು ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸಿದ್ದು, ನಂತರ ಅವಕಾಶ ಸಿಗದೇ ನೊಂದಿದ್ದರು. ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.

ಜುಲೈ 31 ರಂದು ಮಧ್ಯಾಹ್ನ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಾಯಿ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ ಚಂದ್ರಶೇಖರ ಸಿದ್ದಿ(31) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆ ತೆರಳಿದ್ದ ಚಂದ್ರಶೇಖರ ಸಿದ್ದಿ ಹಲ್ಲೆ ಉಳಿದುಕೊಂಡಿದ್ದರು. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ದಂಪತಿ ಕಲಹವೇ ಆತ್ಮಹತ್ಯೆ ಆತ್ಮಹತ್ಯೆಗೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಕಟ್ಟಿಗೆ ಪೊರಕೆಯಿಂದ ಪತ್ನಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular